1). ಉಡುಪಿ:- ರಾಜ್ಯದಲ್ಲಿ ಮಳೆ ಹೆಚ್ಚುತ್ತಿರುವ ಕಾರಣ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ರಜೆ ನೀಡಲಾಗಿತ್ತು. ಈಗ ನಾಳೆಗೂ ಈ ರಜೆ ಮುಂದುವರೆಯಲಿದೆ.
ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಉಡುಪಿ ಜಿಲ್ಲೆಯಲ್ಲಿ ನಾಳೆಯೂ ಕೂಡ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಮಕ್ಕಳಿಗೆ ಶಾಲೆಗೆ ತೆರಳಲು ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಈ ರಜೆ ಘೋಷಣೆ ಮಾಡಲಾಗಿದೆ.
ಇನ್ನು ನಾಳೆ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲು ಸೂಚಿಸಲಾಗಿದೆ.
ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತೆ ಕ್ರಮವಾಗಿ ಈ ರಜೆ ನೀಡಲಾಗಿದೆ.
ರಾಜ್ಯದಲ್ಲಿ ನಾಳೆಯೂ ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಅವಮಾನ ಇಲಾಖೆ ವರದಿಯನ್ನು ಗಮನಿಸಿ ಶಾಲೆಗಳಿಗೆ ರಜೆ ನೀಡಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ತುಂಬಾ ಮುಖ್ಯವಾಗಿರುತ್ತದೆ .
ರಾಜ್ಯದ್ಯಂತ ಕಳೆದ ಎರಡು ಮೂರು ದಿನಗಳಿಂದ ಅನೇಕ ಕಡೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಕಾರಣ ಇನ್ನೂ ಕೆಲವು ಜಿಲ್ಲೆಗಳಿಗೆ ರಜೆ ನೀಡುವ ಸಾಧ್ಯತೆ ಇದೆ.
2). ಕೊಡಗು:- ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ವಿದ್ಯಾರ್ಥಿಗಳ ಸುರಕ್ಷೆ ದೃಷ್ಟಿಯಿಂದ ಜುಲೈ 25 ರಂದು ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಇನ್ನು ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ.
ಕೊಡಗು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ ರಜೆ ಘೋಷಿಸಲಾಗಿತ್ತು. ಈಗ ಮಂಗಳವಾರವೂ ರಜೆ ವಿಸ್ತರಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜ ಘೋಷಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮುಂಗಾರು ಬಿರುಸುಗೊಳ್ಳುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಇನ್ನೂ ಹಲವಡೆ ಪ್ರವಾಹದಿಂದಾಗಿ ರಸ್ತೆ ಮತ್ತು ಸೇತುವೆ ಸಂಪರ್ಕ ಕಡಿತಗೊಂಡಿದೆ. ಮರ, ವಿದ್ಯುತ್ ಕಂಬಗಳು ಬೀಳುತ್ತಲೇ ಇದ್ದು, ರಸ್ತೆ ಮತ್ತು ಕಾಲು ಸೇತುವೆಗಳು ಕೊಚ್ಚಿ ಹೋದ ಘಟನೆಯು ನಡೆದಿದೆ.
ಕಾವೇರಿ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಗೊಳ್ಳುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಲಾಗಿದೆ. ವಾಹನಗಳ ಸಂಚಾರ ದುಸ್ತರವಾಗಿದೆ.
3). ಸುಳ್ಯ:- ಸುಳ್ಯ ತಾಲೂಕಿನ ಶಾಲೆ ಮತ್ತು ಕಾಲೇಜುಗಳಿಗೆ (ಪದವಿ ಪೂರ್ವ ಕಾಲೇಜುಗಳವರೆಗೆ) ಜುಲೈ 25 ರಂದು ರಜೆ ಘೋಷಿಸಲಾಗಿದೆ.
ಸುಳ್ಯ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 21 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಅವಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿ ಇದ್ದು ಆರೆಂಜ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಳ್ಯ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಥಮಿಕ ಮತ್ತು ಪ್ರೌಢಶಾಲೆ ಮತ್ತು ಪದವಿಪೂರ್ವ ಹಾಗೂ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 25ರಂದು ರಜೆಯನ್ನು ಘೋಷಿಸಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳನ್ನು ಹೋಗದಂತೆ ಪಾಲಕರು ಜಾಗೃತ ವಹಿಸಬೇಕು.
ಸುಳ್ಯ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನಗಳಲ್ಲಿ ಇರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚು ತಪ್ಪದೆ ಕಡ್ಡಾಯವಾಗಿ ನಿರ್ವಹಿಸುವುದು.
ತಾಲೂಕು ಆಡಳಿತದಿಂದ ವಿವಿಧ ಆದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ತಹಶೀಲ್ದಾರರು ಸುಳ್ಯ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸುಳ್ಯ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸಾನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 08257-231231 ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ
4). ದಕ್ಷಿಣ ಕನ್ನಡ:- ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.
5). ಉತ್ತರ ಕನ್ನಡ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಶಾಲಾ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕಾವಲಿ ಕಟ್ಟಿ ರಜೆ ಘೋಷಣೆ ಮಾಡಿದ್ದಾರೆ.
6). ಹಾಸನ:- ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಐದು ತಾಲೂಕುಗಳ ಅಂಗನವಾಡಿ ಮತ್ತು ಶಾಲೆಗಳಿಗೆ ನಾಳೆಯೂ ಕೂಡ ರಜೆ ನೀಡಲಾಗಿದೆ. ಆಲೂರು, ಸಕಲೇಶಪುರ, ಬೇಲೂರು, ಅರಕಲಗೂಡು, ಹಾಸನ ತಾಲೂಕುಗಳಲ್ಲಿ ಶಾಲೆಗಳಿಗೆ ಮತ್ತು ಅಂಗನವಾಡಿಗಳಿಗೆ ನಾಳೆಯೂ ರಜೆ ನೀಡಲಾಗಿದೆ. ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮ ಆದೇಶ ಹೊರಡಿಸಿದ್ದಾರೆ.
0 Response to ನಾಳೆ ದಕ್ಷಿಣ ಕನ್ನಡ, ಕೊಡಗು, ಉಡುಪಿ, ಹಾಸನ ಸೇರಿ ವಿವಿಧ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Post a Comment