ಬೆಂಗಳೂರು: ಹಳೆ ಪಿಂಚಣಿ ಯೋಜನೆ(OPS) ಮರು ಜಾರಿಯ ಬಗ್ಗೆ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪಿಸಲಾಗಿದೆ. ನಿಯಮ 72ರ ಅಡಿ ವೈ.ಎ. ನಾರಾಯಣಸ್ವಾಮಿ ಅವರು ವಿಷಯ ಪ್ರಸ್ತಾಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಖಿತ ಉತ್ತರ ನೀಡಿದ್ದಾರೆ.
ಕೆಲವು ರಾಜ್ಯಗಳು ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಿವೆ.
OPS ಜಾರಿ ಮಾಡಿರುವ ರಾಜ್ಯಗಳಲ್ಲಿನ ಅನುಷ್ಠಾನದ ಬಗ್ಗೆ ಅಧ್ಯಯನ ನಡೆಸಿ ಕೂಡಲೇ ವರದಿ ಸಲ್ಲಿಸಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ರಚಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಖಿತ ಉತ್ತರ ನೀಡಿದ್ದಾರೆ.
0 Response to OPS ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಎಂ ಗುಡ್ ನ್ಯೂಸ್: ಹಳೆ ಪಿಂಚಣಿ ಮರು ಜಾರಿ ವರದಿಗೆ ಸಮಿತಿ ರಚನೆ
Post a Comment