ರಾಯಚೂರು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರನ್ನು ಅಮಾನತು ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ತಾಲೂಕಿನ ಅಪ್ಪನದೊಡ್ಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಲ್ಲಿ ಬಿದ್ದು ಬಿಸಿ ಊಟ ಸೇವಿಸಿದ 49 ಶಾಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಅಕ್ಷರ ದಾಸೋಹ ಯೋಜನೆಯ ತಾಲೂಕು ಸಹಾಯಕ ನಿರ್ದೇಶಕಿ ಹಾಗೂ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಜುಲೈ 1 ರಂದು ಶಾಲೆಯಲ್ಲಿ ಮಧ್ಯಾಹ್ನದ ಬಿಸಿಊಟ ಸೇವಿಸಿ 49 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು ವಿದ್ಯಾರ್ಥಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಘಟನೆಯಿಂದಾಗಿ ವಿದ್ಯಾರ್ಥಿಗಳ ಪೋಷಕರು ತೀವ್ರ ಆತಂಕಕ್ಕೀಡಾಗಿದ್ದರು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ನಿರ್ಲಕ್ಷ ತೋರಿದ ಅಕ್ಷರ ದಾಸೋಹ ಯೋಜನೆಯ ತಾಲೂಕು ಸಹಾಯಕ ನಿರ್ದೇಶಕಿ ಮಂಜುಳಾ ಮತ್ತು ಶಾಲಾ ಮುಖ್ಯ ಶಿಕ್ಷಕ ಕನಕಪ್ಪ ಅವರನ್ನು ಅಮಾನತುಗೊಳಿಸಿದೆ.
ವಿಮೆ ಎಂದರೇನು? ಭಾರತದಲ್ಲಿ ಲಭ್ಯವಿರುವ ವಿವಿಧ ವಿಮಾ ಯೋಜನೆಗಳು ಯಾವುವು..?
ಘಟನೆಗೆ ಸಂಬಂಧ ತನಿಖೆ ನಡೆಸುವಂತೆ ರಾಜ್ಯದ ಸಚಿವರು ಮತ್ತು ಶಾಸಕರು ಸೂಚನೆ ನೀಡಿದ್ದರು. ಅದರಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಿ ವರದಿಯನ್ನು ನೀಡಿದ್ದು ಅದನ್ನು ಆಧರಿಸಿ ಜಿಲ್ಲಾಡಳಿತ ಇಬ್ಬರ ವಿರುದ್ಧ ಕ್ರಮ ಕೈಗೊಂಡಿದೆ.
0 Response to ಶಾಲಾ ಮುಖ್ಯ ಶಿಕ್ಷಕ ಅಮಾನತು - ಕರ್ತವ್ಯ ಲೋಪ ಹಿನ್ನಲೆಯಲ್ಲಿ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರು ಅಮಾನತು
Post a Comment