ಇತ್ತೀಚೆಗೆ ಚಿಕ್ಕ ಮಕ್ಕಳು (Children) ಹೃದಯಾಘಾತದಿಂದ (heart attack) ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಆಟವಾಡುತ್ತಿರುವಾಗಲೋ ಅಥವಾ ಕುಳಿತುಕೊಂಡಿರುವಾಗಲೋ ಏಕಾಏಕಿ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಮೊನ್ನೇ ಚಾಮರಾಜನಗರದ ವಿದ್ಯಾರ್ಥಿಯೋರ್ವಳು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಳು. ಇದರ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮಂಗಳೂರು, ಆ.14: ಕರ್ನಾಟಕದಲ್ಲಿ ಸ್ಪಂದನಾ ವಿಜಯ್ ರಾಘವೇಂದ್ರ ಅವರ ಹೃದಯಾಘಾತದ ಸಾವು ಇನ್ನೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ಇದರ ಬೆನ್ನಲ್ಲೇ ಲೋ ಬಿಪಿಯಿಂದ(Low BP) ಹೃದಯಾಘಾತ(Heart Attack) ಸಂಭವಿಸಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ (Student) ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಸುಮಾಗೆ ಆಗಾಗ ಆರೋಗ್ಯ ಕೈ ಕೊಟ್ಟಿದ್ದು ಲೋ ಬಿಪಿಯಾಗಿ ಹೃದಯಾಘಾತವಾಗಿ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ಸುಮ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಆ.11 ರಂದು ಮತ್ತೆ ಆರೋಗ್ಯ ಹಾಳಾಗಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಇನ್ನೇನು ಆರೋಗ್ಯ ಸರಿಯಾಯ್ತು ಎನ್ನವಷ್ಟುರಲ್ಲಿ ಮತ್ತೆ ಆ.13 ರಂದು ಸಂಜೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
0 Response to ಸ್ಪಂದನಾ ವಿಜಯ್ ಬೆನ್ನಲ್ಲೇ ಹೃದಯಾಘಾತದಿಂದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು
Post a Comment