-->

Responsive Ads

Responsive Adsಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲುಬೆಂಗಳೂರು:

ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಹೆಚ್.ಡಿ.ಕುಮಾರಸ್ವಾಮಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಇಂದು ಬೆಳಗಿನ ಜಾವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.


ಇತ್ತೀಚೆಗೆ ಎರಡು ಬಾರಿ ವಿದೇಶ ಪ್ರವಾಸ ಮುಗಿಸಿ ವಾಪಸ್ ಆಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದರು. ಈ ಮಧ್ಯೆ ಜ್ವರದಿಂದ ಬಳಲುತ್ತಿರುವ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

0 Response to ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

Post a Comment

Advertise