ನಾಡು ಮಾಹಿತಿ:-
ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಶೇ.38 ರಿಂದ 40ರಷ್ಟು ವೇತನ ಹೆಚ್ಚಾಗುವ ವಿಶ್ವಾಸವಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ತಿಳಿಸಿದ್ದಾರೆ.
ಚಿತ್ರದುರ್ಗದ ಹೊಸದುರ್ಗದಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿ,ರಾಜ್ಯ ಸರ್ಕಾರ ರಚಿಸಿರುವಂತ 7ನೇ ವೇತನ ಆಯೋಗದ ಸಮಿತಿಯು ನವೆಂಬರ್ ಅಂತ್ಯದ ವೇಳೆಗೆ ವೇತನ ಹೆಚ್ಚಳಕ್ಕೆ ಪೂರಕವಾಗಿರುವ ವರದಿಯನ್ನು ಸಲ್ಲಿಸಿದೆ .7ನೇ ವೇತನ ಆಯೋಗದ ಸಮಿತಿಯನ್ನು ಶುಕ್ರವಾರ ಭೇಟಿ ಮಾಡಿ ಶೇ.38 ರಿಂದ 40ರಷ್ಟು ವೇತನ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ.
ಏಪ್ರಿಲ್.1ರಂದು ನಡೆಸಿದ ಒಂದು ದಿನದ ಮುಷ್ಕರದ ಫಲವಾಗಿ ಮಧ್ಯಂತರ ಪರಿಹಾರ ಸಿಕ್ಕಿದೆ. 7ನೇ ವೇತನ ಆಯೋಗದ ವರದಿ ಜಾರಿ ಹಾಗೂ ಒಪಿಎಸ್ ಮರು ಜಾರಿ ನಮ್ಮ ಪ್ರಮುಖ ಬೇಡಿಕೆಗಳಾಗಿವೆ ಎಂದು ತಿಳಿಸಿದರು. ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಿದೆ.
0 Response to 7ನೇ ವೇತನ ಆಯೋಗ; ನವೆಂಬರ್ ನಲ್ಲಿ ಶೇ.40 ರಷ್ಟು ವೇತನ ಹೆಚ್ಚಳ ವಿಶ್ವಾಸ; ಸಿ.ಎನ್ ಷಡಾಕ್ಷರಿ
Post a Comment